HomeKarnatakaಕಾವೇರಿ ನೀರು ಸಂಪರ್ಕ ವ್ಯವಸ್ಥೆ ಇನ್ನಷ್ಟು ಸರಳ: ಮನೆ ಬಾಗಿಲಿಗೆ ತೆರಳಿ ಅಭಿಯಾನ

ಕಾವೇರಿ ನೀರು ಸಂಪರ್ಕ ವ್ಯವಸ್ಥೆ ಇನ್ನಷ್ಟು ಸರಳ: ಮನೆ ಬಾಗಿಲಿಗೆ ತೆರಳಿ ಅಭಿಯಾನ

ಬೆಂಗಳೂರು: ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ನೀರಿನ ಸಂಪರ್ಕ ನೀಡುವುದಕ್ಕಾಗಿ ಅಭಿಯಾನ ಆರಂಭಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.

ಕಾವೇರಿ ಐದನೇ ಹಂತದ ಯೋಜನೆಯಡಿ ನೀರಿನ ಸಂಪರ್ಕಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಗಳ ಹಸ್ತಕ್ಷೇಪದ ಬಗ್ಗೆ ದೂರುಗಳು ಕೇಳಿಬಂದಿದ್ದವು. ಕೆಲವು ಗ್ರಾಹಕರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಕುರಿತು ಗೊಂದಲಗಳಿರುವ ಬಗ್ಗೆಯೂ ಗಮನ ಸೆಳೆದಿದ್ದರು.

ಈ ಕಾರಣಕ್ಕಾಗಿ ನೀರಿನ ಸಂಪರ್ಕ ಪಡೆಯುವ ವ್ಯವಸ್ಥೆಯನ್ನು ಸರಳಗೊಳಿಸಿ, ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ನೀರಿನ ಸಂಪರ್ಕ ನೀಡುವುದಕ್ಕಾಗಿ ಅಭಿಯಾನ ಆರಂಭಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular