HomeKarnatakaರಂಗೇರಿದ ಚುನಾವಣಾ ಕಣ: ರಾಜ್ಯದಲ್ಲಿಂದು ಅಮಿತ್ ಶಾ ಭರ್ಜರಿ ಪ್ರಚಾರ

ರಂಗೇರಿದ ಚುನಾವಣಾ ಕಣ: ರಾಜ್ಯದಲ್ಲಿಂದು ಅಮಿತ್ ಶಾ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಐದು ಜಿಲ್ಲೆಗಳ ಸಮಾವೇಶದಲ್ಲಿ ಭಾಗವಹಿಸಲಿರುವ ಅವರು ಟಿಕೆಟ್ ಹಂಚಿಕೆ ಅತೃಪ್ತಿ ಶಮನಕ್ಕೂ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಜೆಪಿ, ಜೆಡಿಎಸ್ ಸಮನ್ವಯ ಸಭೆ ನಡೆಸಲಿದ್ದಾರೆ.

ತಡರಾತ್ರಿ ಬೆಂಗಳೂರಿಗೆ ಆಗಮಿಸಿರುವ ಅಮಿತ್ ಶಾ ಬೆಳಿಗ್ಗೆ 9 ಗಂಟೆಗೆ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಬಿಜೆಪಿ, ಜೆಡಿಎಸ್ ನಾಯಕರ ಸಮನ್ವಯ ಸಭೆ ನಡೆಸಲಿದ್ದಾರೆ. ಎರಡೂ ಪಕ್ಷಗಳ ನಡುವಿನ ಹೊಂದಾಣಿಕೆಯನ್ನು ಸುಸೂತ್ರವಾಗಿ ಮುಂದುವರೆಸುವುದು, ಲೋಕಸಭೆ ಚುನಾವಣೆ ಗೆಲುವಿನ ರಣತಂತ್ರ ಕುರಿತಾಗಿ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಬೆಂಗಳೂರು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಸುತ್ತಲಿನ ಐದು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ವಿವಿಧ ಲೋಕಸಭಾ ಕ್ಷೇತ್ರಗಳ ಮುಖಂಡರ ನಡುವೆ ಉಂಟಾದ ಭಿನ್ನಾಭಿಪ್ರಾಯ ಬಗೆಹರಿಸಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಸೂಚನೆ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಜೆ 6 ಗಂಟೆಗೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular