HomeLatest Newsಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಆಧಾರ್ ನೋಂದಣಿ ಮಾಡಿಸಲು ಅಭಿಯಾನ

ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಆಧಾರ್ ನೋಂದಣಿ ಮಾಡಿಸಲು ಅಭಿಯಾನ

ದಾವಣಗೆರೆ ಜಿಲ್ಲೆಯ ಎಲ್ಲಾ ಬಾಲಕ, ಬಾಲಕಿಯರಿಗೆ ಆಧಾರ್ ಗುರುತಿನ ಚೀಟಿಗಳನ್ನು ಮತ್ತು ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಕುರಿತು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

  ಈ ಅಭಿಯಾನದ ಭಾಗವಾಗಿ ದಾವಣಗೆರೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಇವರು ಸಾಥಿ ಸಮಿತಿಯನ್ನು ರಚಿಸಲಾಗಿದೆ.

ಸಾಥಿ ಕಮಿಟಿಯ ಮೂಲಕ ಜಿಲ್ಲೆಯಾದ್ಯಂತ ಅಧಾರ್ ನೊಂದಣಿ ಆಗದ ನಿರ್ಗತಿಕ ಮಕ್ಕಳು, ಕುಟುಂಬದಿಂದ ಹೊರಗಡೆ ಉಳಿದ ಮಕ್ಕಳು, ರಕ್ಷಣೆ ಇಲ್ಲದ ಮಕ್ಕಳು ಕೊಳಗೇರಿ ನಿವಾಸಿಗಳು, ರೈಲ್ವೆ ನಿಲ್ದಾಣದ ಮತ್ತು ಬಸ್ ನಿಲ್ದಾಣಗಳಲ್ಲಿ ವಾಸಿಸುವ ನಿರ್ಗತಿಕ ಮಕ್ಕಳು, ಮಕ್ಕಳ ಆರೈಕೆ ಸಂಸ್ಥೆಗಳಲ್ಲಿ ವಾಸಿಸುವ ಅನಾಥರು. ಕಾನೂನು ಬಾಹಿರಕೃತ್ಯಗಳಲ್ಲಿ ತೊಡಗಿರುವ ಮಕ್ಕಳು, ಕಳ್ಳ ಸಾಗಾಣಿಕೆ, ಭಿಕ್ಷಾಟನೆ ಮತ್ತು ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟವರು, ಕಾಣೆಯಾದವರಲ್ಲಿ ಸಿಕ್ಕಂತಹ ಮಕ್ಕಳು, ಇತ್ಯಾದಿ ನಿರ್ಗತಿಕ ಮಕ್ಕಳ ಬಗ್ಗೆ ಸಮಾರೋಪಾದಿಯಲ್ಲಿ ಕಾರ್ಯಾಚರಣೆ ನಡೆಸಿ ಅವರುಗಳಿಗೆ ಆಧಾರ್ ಗುರುತಿನ ಚೀಟಿ ಮತ್ತು ಇನ್ನಿತರ ಸೌಲಭ್ಯಗಳನ್ನು ಒದಗಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

    ಕಾನೂನು ಸೇವೆಗಳ ಪ್ರಾಧಿಕಾರದ ಮತ್ತು ಸಮಿತಿಯ ಉದ್ದೇಶಗಳನ್ನು ಪೂರೈಸುವಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿಗಳು, ಶಾಲಾ ಶಿಕ್ಷಕರು ಮುಖ್ಯೋಪಾಧ್ಯಾಯರು ಹಾಗೂ ಇತರೆ ಅಧಿಕಾರಿಗಳು, ಪಾಲಕ ಮತ್ತು ಪೆÇೀಷಕರು ಸಹಕಾರ ನೀಡಬೇಕು.ಇಲ್ಲಿಯವರೆಗೆ ಒಟ್ಟು 42 ಅನಾಥ, ನಿರ್ಗತಿಕ ಮಕ್ಕಳು, ಸರ್ಕಾರಿ ಮತ್ತು ಅನುದಾನಿತ ತಂಗುದಾಣಗಳಲ್ಲಿ ವಾಸಿಸುವ ಮಕ್ಕಳಿಗೆ ಪಾಲಕ, ಪೆÇೀಷಕರು ಇಲ್ಲದ ಆಧಾರ್ ಗುರುತಿನ ಚೀಟಿಗಳು ಇಲ್ಲವೆಂದು ತಿಳಿದು ಬಂದಿದೆ. ಅದೇ ರೀತಿ ಜಿಲ್ಲೆಯಲ್ಲಿ ಒಟ್ಟು 6050 ಪ್ರಾಥಮಿಕ ಶಾಲಾ ಮಕ್ಕಳಿಗೆ ಮತ್ತು 2451 ಪ್ರೌಢಶಾಲಾ ಮಕ್ಕಳಿಗೆ ಆಧಾರ್ ಗುರುತಿನ ಚೀಟಿ ಇಲ್ಲವೆಂದು ತಿಳಿದು ಬಂದಿರುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿರುತ್ತದೆ.

 ಮೇಲ್ಕಂಡ ಸಾಥಿ ಅಭಿಯಾನಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯವರು, ಮಕ್ಕಳ ಪಾಲಕ ಪೋಷಕರು ಹಾಗೂ ಎಲ್ಲರೂ ಕೂಡ ಸಹಕರಿಸಬೇಕೆಂದು ಮತ್ತು ಅತ್ಯುತ್ತಮವಾದ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular