ಪಕ್ಷ ತೊರೆಯದೆ ಕಾಂಗ್ರೆಸ್ ಪರ ಬಿಜೆಪಿ ಶಾಸಕರುಗಳ ಪ್ರಚಾರ; ಬಿಜೆಪಿಗೆ ಬಿಸಿ ತುಪ್ಪವಾದ ಎಸ್.ಟಿ.ಎಸ್ – ಶಿವರಾಂ ಹೆಬ್ಬಾರ್ ನಡೆ !

Shivaram Hebbar, ST Somashekar Say They Won't Leave BJP | IBC World News

ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಅತಿಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೈಬಲಪಡಿಸಲು ಮುಂದಾಗಿರುವ ರಾಜ್ಯ ಬಿಜೆಪಿ ನಾಯಕರಿಗೆ ಸ್ವಪಕ್ಷದ ಇಬ್ಬರು ಶಾಸಕರ ನಡೆ, ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಹಲವು ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ಇದ್ದರೂ ಸಹ ಅದು ಒಳಗೊಳಗೆ ಕುದಿಯುತ್ತಿದ್ದು, ಮೇಲ್ನೋಟಕ್ಕೆ ಕಾಣುತ್ತಿಲ್ಲ. ಆದರೆ ಶಾಸಕರುಗಳಾದ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಮಾತ್ರ ಬಹಿರಂಗವಾಗಿಯೇ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಅದರಲ್ಲೂ ಎಸ್ ಟಿ ಸೋಮಶೇಖರ್ ಅವರಂತೂ ಘಂಟಾಘೋಷವಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದಾರೆ.

ಇನ್ನು ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡದೆ ತಟಸ್ಥವಾಗಿ ಉಳಿದಿದ್ದ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಪರ ಪ್ರಚಾರ ನಡೆಸುತ್ತಿಲ್ಲ. ಬದಲಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ತಮ್ಮ ಬೆಂಬಲಿಗರಿಗೆ ಸೂಚಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಇಬ್ಬರು ಶಾಸಕರುಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲು ಸಹ ಬಿಜೆಪಿ ನಾಯಕರು ಮುಂದಾಗಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read