ಬೆಂಗಳೂರು : ರಾಜ್ಯದ ಸರ್ಕಾರಿ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೇ 15 ಮತ್ತು 16 ರಂದು ‘ಕ್ಯಾಂಪಸ್ ಟು ಕರಿಯರ್’ (ಸಿ ಟು ಸಿ) ಶಿಕ್ಷಣ ಶೃಂಗವನ್ನು ಹಮ್ಮಿಕೊಳ್ಳಲಾಗಿದೆ. ಉನ್ನತ ಶಿಕ್ಷಣದಲ್ಲಿ ಕೌಶಲ ಆಧಾರಿತ ಕೋರ್ಸ್ಗಳನ್ನು ಪರಿಚಯಿಸಿ, ಕೈಗಾರಿಕಾ ವಲಯದ ಅಗತ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದು ಈ ಶೃಂಗದ ಪ್ರಮುಖ ಉದ್ದೇಶ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ತಿಳಿಸಿದ್ದಾರೆ.
ಉನ್ನತ ಶಿಕ್ಷಣದಲ್ಲಿ ಕೌಶಲ ಉತ್ತೇಜಿಸಲು ಮೇ 15 ಮತ್ತು 16 ರಂದು ಕ್ಯಾಂಪಸ್ ಟು ಕರಿಯರ್ (ಸಿ ಟು ಸಿ) ಶಿಕ್ಷಣ ಶೃಂಗ ಹಮ್ಮಿಕೊಳ್ಳಲಾಗಿದೆ. ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಕೌಶಲ ಕೋರ್ಸ್ಗಳನ್ನು ಪರಿಚಯಿಸುವ ಮೂಲಕ ಉದ್ಯೋಗಾವಕಾಶ ಕಲ್ಪಿಸುವುದು, ಹೊಸ ಉದ್ಯೋಗಗಳನ್ನು ಸೃಷ್ಟಿಸುವುದು ಇದರ ಉದ್ದೇಶ. ಸರ್ಕಾರಿ ಕಾಲೇಜುಗಳು ಹಾಗೂ ವಿಶ್ವ ವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟ, ಕೈಗಾರಿಕಾ ವಲಯದಲ್ಲಿ ಅವಶ್ಯವಿರುವ ಕೌಶಲ ಶಿಕ್ಷಣ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್ ಅವರು ತಿಳಿಸಿದ್ದಾರೆ.

