ಕೂದಲಿನ ಆರೈಕೆಗೆ ಉತ್ತಮನಾ ಈ ಎಣ್ಣೆ

ಕೂದಲಿನ ಆರೈಕೆಗಾಗಿ ಹಲವಾರು ಎಣ್ಣೆಯನ್ನು ಬಳಸುತ್ತಾರೆ. ಆದರೆ ಮೀನಿನ ಎಣ್ಣೆಯನ್ನು ಕೂದಲಿಗೆ ಯಾರು ಬಳಸುವುದಿಲ್ಲ. ಮೀನಿನ ಎಣ್ಣೆಯನ್ನು ಹೆಚ್ಚಾಗಿ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಆದರೆ ಇದನ್ನು ಕೂದಲಿಗೆ ಹಚ್ಚುವುದರಿಂದ ಏನಾಗುತ್ತದೆ ಎಂಬುದನ್ನು ತಿಳಿಯಿರಿ.

ಮೀನಿನ ಎಣ್ಣೆಯಲ್ಲಿ ಒಮೆಗಾ 3 ಕೊಬ್ಬಿನಾಮ್ಲ ಸಮೃದ್ಧವಾಗಿದೆ. ಇದನ್ನು ಕೂದಲಿಗೆ ಹಚ್ಚಿ ಮಸಾಜ್ ಮಾಡುವುದರಿಂದ ಒಣಕೂದಲಿನ ಸಮಸ್ಯೆ, ಕೂದಲು ಕವಲೊಡೆಯುವಿಕೆಯಂತಹ ಸಮಸ್ಯೆಗಳನ್ನು ನಿವಾರಿಸಬಹುದು.

ಮೀನಿನ ಎಣ್ಣೆಯಲ್ಲಿರುವ ಒಮೆಗಾ 3 ಕೊಬ್ಬಿನಾಮ್ಲ ಕೂದಲಿನ ಕಿರುಚೀಲಗಳನ್ನು ಆರೋಗ್ಯವಾಗಿಡುತ್ತದೆ. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ನೆತ್ತಿಯನ್ನು ಪೋಷಿಸುತ್ತದೆ. ನೆತ್ತಿಯಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಇದರಿಂದ ಕೂದಲು ಬಲವಾಗುತ್ತದೆ.

ಮೀನಿನ ಎಣ್ಣೆಯನ್ನು ಕೂದಲಿಗೆ ನಿಯಮಿತವಾಗಿ ಬಳಸುವುದರಿಂದ ನೆತ್ತಿಯಲ್ಲಿರುವ ತುರಿಕೆ ನಿವಾರಣೆಯಾಗುತ್ತದೆ. ಹಾಗೂ ತಲೆಹೊಟ್ಟಿನ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಇದು ಕೂದಲಿನ ಬುಡಕ್ಕೆ ಆಮ್ಲಜನಕವನ್ನು ಪೂರೈಸುತ್ತದೆ. ಇದರಿಂದ ಒಣಕೂದಲಿನ ಸಮಸ್ಯೆ ಕಾಡುವುದಿಲ್ಲ.

ಹಾಗಾಗಿ ನಿಯಮಿತವಾಗಿ ಮೀನಿನ ಎಣ್ಣೆಯನ್ನು ಕೂದಲಿಗೆ ಹಚ್ಚಿಕೊಳ್ಳುವುದರ ಮೂಲಕ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read