HomeLatest News'ರಾಜ್ಯ ಸರ್ಕಾರಿ' ನೌಕರರು ಸರ್ಕಾರವನ್ನು ಟೀಕಿಸಬಹುದಾ ? ಕಾನೂನು ಏನು ಹೇಳುತ್ತದೆ ತಿಳಿಯಿರಿ

‘ರಾಜ್ಯ ಸರ್ಕಾರಿ’ ನೌಕರರು ಸರ್ಕಾರವನ್ನು ಟೀಕಿಸಬಹುದಾ ? ಕಾನೂನು ಏನು ಹೇಳುತ್ತದೆ ತಿಳಿಯಿರಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುವ ನೌಕರರಾಗಿದ್ದು, ಇವರ ಹಕ್ಕುಗಳು, ಕರ್ತವ್ಯಗಳು ಮತ್ತು ಕಲ್ಯಾಣಕ್ಕಾಗಿ ಸರ್ಕಾರವು ನಿಯಮಗಳು, ತರಬೇತಿಗಳನ್ನು ರೂಪಿಸುತ್ತದೆ   ರಾಜ್ಯ  ಸರ್ಕಾರಿ’ ನೌಕರರು ಸರ್ಕಾರವನ್ನು ಟೀಕಿಸಬಹುದಾ ? ಕಾನೂನು ಏನು ಹೇಳುತ್ತದೆ . ಇಲ್ಲಿದೆ ಮಾಹಿತಿ

ಕಾನೂನು ಏನು ಹೇಳುತ್ತದೆ..?

ಸರ್ಕಾರವನ್ನು ಟೀಕಿಸುವುದು.- ಯಾರೇ ಸರ್ಕಾರಿ ನೌಕರನು, ಆಕಾಶವಾಣಿ ಪ್ರಸಾರದಲ್ಲಾಗಲಿ ಅಥವಾ ಅವನಹೆಸರಿನಲ್ಲಿ ಅಥವಾ ಅನಾಮಧೇಯವಾಗಿ, ಗುಪ್ತನಾಮದಲ್ಲಿ ಅಥವಾ ಬೇರೊಬ್ಬನ ಹೆಸರಿನಲ್ಲಿ ಪ್ರಕಟಿಸಲಾದ ಇತರ ಯಾವುದೇ ದಸ್ತಾವೇಜಿನಲ್ಲಿ ಅಥವಾ ಪತ್ರಿಕೆಗೆ ಬರೆದ ಯಾವುದೇ ಪತ್ರದಲ್ಲಿ ಅಥವಾ ಯಾವುದೇ ಸಾರ್ವಜನಿಕ ಹೇಳಿಕೆಯಲ್ಲಿ,-

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

(i) ಕರ್ನಾಟಕ ಸರ್ಕಾರದ ಅಥವಾ ಕೇಂದ್ರ ಸರ್ಕಾರದ ಅಥವಾ ಯಾವುದೇ ಇತರ ರಾಜ್ಯ ಸರ್ಕಾರದ ಪ್ರಸ್ತುತ ಅಥವಾ ಇತ್ತೀಚಿನ ಯಾವುದೇ ನೀತಿಯ ಅಥವಾ ಕ್ರಮದ ಬಗ್ಗೆ ಪ್ರತಿಕೂಲ ಟೀಕೆಯ ಪರಿಣಾಮ ಹೊಂದಿರುವಂಥ:

 [ಪರಂತು, ಈ ಖಂಡದಲ್ಲಿ ಒಳಗೊಂಡಿರುವುದು ಯಾವುದೂ, ಸರ್ಕಾರಿ ನೌಕರನು, ಸರ್ಕಾರಿ ನೌಕರರ ಕಾರ್ಮಿಕ ಸಂಘದ ಅಥವಾ ಸಂಘದ ಪದಾಧಿಕಾರಿಯಾಗಿ ಅಂಥ ಸರ್ಕಾರಿ ನೌಕರರ ಸೇವಾ ಸ್ಥಿತಿಗತಿ ರಕ್ಷಿಸುವ ಅಥವಾ ಅವುಗಳಲ್ಲಿ ಸುಧಾರಣೆಯನ್ನು ಸುನಿಶ್ಚಿತಗೊಳಿಸುವ ಉದ್ದೇಶಗಳಿಗಾಗಿ ವ್ಯಕ್ತಪಡಿಸಿದ ಪ್ರಾಮಾಣಿಕ ಅಭಿಪ್ರಾಯಗಳಿಗೆ ಅನ್ವಯಿಸತಕ್ಕದ್ದಲ್ಲ; ಅಥವಾ]

1. ಅಧಿಸೂಚನೆ ಸಂಖ್ಯೆ ಜಿಎಡಿ 6 ಎಸ್‌ಎಸ್‌ಆರ್ 73. ದಿನಾಂಕ 9ನೇ ಅಕ್ಟೋಬರ್ 1973 (ಕೆಜಿಡಿ 23 ಅಕ್ಟೋಬರ್ 1973)ರ ಮೂಲಕ ಪ್ರತಿಯೋಜಿಸಲಾಗಿದೆ.

(ii) ಕರ್ನಾಟಕ ಸರ್ಕಾರದ ಮತ್ತು ಕೇಂದ್ರ ಸರ್ಕಾರದ ಅಥವಾ ಇತರ ಯಾವುದೇ ರಾಜ್ಯ ಸರ್ಕಾರದ ನಡುವಿನ ಸಂಬಂಧಗಳನ್ನು ಇಕ್ಕಟ್ಟಿಗೆ ಸಿಲುಕಿಸುವಂಥ; ಅಥವಾ

(iii) ಕೇಂದ್ರ ಸರ್ಕಾರದ ಮತ್ತು ಯಾವುದೇ ವಿದೇಶಿ ಸರ್ಕಾರದ ನಡುವಿನ ಸಂಬಂಧಗಳನ್ನು ಇಕ್ಕಟ್ಟಿಗೆ ಸಿಲುಕಿಸುವಂಥ ಸಂಗತಿಗಳ ನಿರೂಪಣೆ ಮಾಡತಕ್ಕದ್ದಲ್ಲ ಅಥವಾ ಅಭಿಪ್ರಾಯ ವ್ಯಕ್ತಪಡಿಸತಕ್ಕದ್ದಲ್ಲ

ಯಾವುದೇ ಸಂಗತಿಯ ನಿರೂಪಣೆ ಮಾಡತಕ್ಕದ್ದಲ್ಲ ಅಥವಾ ಅಭಿಪ್ರಾಯ ವ್ಯಕ್ತಪಡಿಸತಕ್ಕದ್ದಲ್ಲ:

ಪರಂತು, ಈ ನಿಯಮದಲ್ಲಿರುವುದು ಯಾವುದೂ, ಸರ್ಕಾರಿ ನೌಕರನು, ತನ್ನ ಪದೀಯ ಸಾಮರ್ಥ್ಯದಲ್ಲಿ ಅಥವಾ ತನಗೆ ವಹಿಸಲಾಗಿರುವ ಕರ್ತವ್ಯವನ್ನು ವಿಧ್ಯುಕ್ತವಾಗಿ ನಿರ್ವಹಿಸುವಾಗ ನೀಡಿದ ಯಾವುದೇ ಹೇಳಿಕೆಗೆ ಅಥವಾ ವ್ಯಕ್ತಪಡಿಸಿದ ಅಭಿಪ್ರಾಯಗಳಿಗೆ ಅನ್ವಯವಾಗತಕ್ಕದ್ದಲ್ಲ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular