BIG NEWS: ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು: ಕೆನಡಾದಲ್ಲಿ ಕನ್ನಡಿಗನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

37 ವರ್ಷದ ಚಂದನ್ ಕುಮಾರ್ ಹತ್ಯೆಯಾದ ವ್ಯಕ್ತಿ. ಬೆಂಗಳೂರಿನ ನೆಲಮಂಗಲ ಮೂಲದ ತ್ಯಾಮಗೊಂಡ್ಲುವಿನ ನಿವಾಸಿ. ಕಳೆದ 6 ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಭಾನುವಾರ ರಾತ್ರಿ 9 ಗಂಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಂದನ್ ಕುಮಾರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹಲವು ಗುಂಡುಗಳು ಚಂದನ್ ದೇಹವನ್ನು ಹೊಕ್ಕಿವೆ. ಘಟನಾ ಸ್ಥಳದಲ್ಲೇ ಚಂದನ್ ಸಾವನ್ನಪ್ಪಿದ್ದಾರೆ.

ಚಂದನ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಸಾವನ್ನಪ್ಪಿದ್ದಾಗಿ ಕೆನಡಾ ಪೊಲೀಸರು ನೆಲಮಂಗಲದಲ್ಲಿರುವ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಗನನ್ನು ಕಳೆದುಕೊಂಡಿರುವ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಮೃತದೇಹವನ್ನು ನೆಲಮಂಗಲಕ್ಕೆ ತರಲು ಸಹಾಯ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪೋಷಕರು ಮನವಿ ಮಾಡಿದ್ದಾರೆ.

ಯಾವ ಕಾರಣಕ್ಕೆ ಚಂದನ್ ಮೇಲೆ ಗುಂಡಿನ ದಾಳಿ ನಡೆದಿದೆ? ಹತ್ಯೆಗೆ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read