HomeIndia`ಡಿಗ್ರಿ' ಪಾಸಾದವರಿಗೆ ಉದ್ಯೋಗವಕಾಶ : `ಕೆನರಾ ಬ್ಯಾಂಕ್' ನಲ್ಲಿ 500 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ...

`ಡಿಗ್ರಿ’ ಪಾಸಾದವರಿಗೆ ಉದ್ಯೋಗವಕಾಶ : `ಕೆನರಾ ಬ್ಯಾಂಕ್’ ನಲ್ಲಿ 500 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ|Canara Bank Recruitment 2023

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಕೆನರಾ ಬ್ಯಾಂಕ್ ಸಿಹಿ ಸುದ್ದಿ ನೀಡಿದೆ. 500 ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಒಟ್ಟು 500 ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕೃತ ವೆಬ್ಸೈಟ್: https://ibpsonline.ibps.in/crppo13jun23/

ಶೈಕ್ಷಣಿಕ ಅರ್ಹತೆ:

ಕೆನರಾ ಬ್ಯಾಂಕ್ ಬಿಡುಗಡೆ ಮಾಡಿದ ನೇಮಕಾತಿ ಅಧಿಸೂಚನೆಯ ಪ್ರಕಾರ. ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:

ಆಗಸ್ಟ್ 1, 2023 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಮೀರಬಾರದು.

ವಯೋಮಿತಿ ಸಡಿಲಿಕೆ:

ಒಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ – 3 ವರ್ಷ

ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ

ಪಿಡಬ್ಲ್ಯೂಡಿ ಅಭ್ಯರ್ಥಿಗಳು – 10 ವರ್ಷ

ಅರ್ಜಿ ಶುಲ್ಕ:

ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 175 ರೂ.

ಇತರೆ ಅಭ್ಯರ್ಥಿಗಳಿಗೆ – 850 ರೂ ಪಾವತಿ ವಿಧಾನ – ಆನ್ಲೈನ್

ಆಯ್ಕೆ ಪ್ರಕ್ರಿಯೆ:

– ಪೂರ್ವಭಾವಿ ಪರೀಕ್ಷೆ

– ಮುಖ್ಯ ಪರೀಕ್ಷೆ

– ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 01-08-2023

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21-08-2023

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular