ಗಮನಿಸಿ : ರದ್ದಾದ ‘ರೇಷನ್ ಕಾರ್ಡ್’ ಲಿಸ್ಟ್ ಬಿಡುಗಡೆ : ಈ ರೀತಿ ಚೆಕ್ ಮಾಡಿ, ಇವರಿಗೆ ಸಿಗಲ್ಲ ಈ ಸೌಲಭ್ಯಗಳು..!

ಗೃಹಲಕ್ಷ್ಮಿ ಯೋಜನೆ, ಕಿಸಾನ್ ಯೋಜನೆ, ಅನ್ನಭಾಗ್ಯ ಯೋಜನೆ ಸೇರಿದಂತೆ ಎಲ್ಲಾ ಯೋಜನೆಗೆ ಪಡಿತರ ಹಣ ಬರಬೇಕೆಂದರೆ ರೇಷನ್ ಕಾರ್ಡ್ ಸರಿ ಇರಬೇಕು. ಅದಕ್ಕೆ , ಇ – ಕೆವೈಸಿ (E-KYC) ಮಾಡಿಸಬೇಕು.

ಇನ್ನೂ, ರೇಷನ್ ಪಡೆಯದವರ ರೇಷನ್ ಕಾರ್ಡ್ ಅಮಾನತು ಮಾಡಲು ಆಹಾರ ಇಲಾಖೆ ನಿರ್ಧರಿಸಿದ್ದು, ಯಾರು ಪ್ರತಿ ತಿಂಗಳು ರೇಷನ್ ಪಡೆಯುದಿಲ್ಲವೋ ಅಂತಹವರ ಕಾರ್ಡ್ ರದ್ದತಿಗೆ ಆಹಾರ ಇಲಾಖೆ ಮುಂದಾಗಿದೆ.ಅದೇ ರೀತಿ ಅನರ್ಹ ಫಲಾನುಭವಿಗಳ ರೇಷನ್ ಕಾರ್ಡ್ ನ್ನು ಕೂಡ ರದ್ದು ಮಾಡಲಾಗಿದೆ. ಸದ್ಯ, ರದ್ದಾದ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ ಮಾಡಲಾಗಿದ್ದು, ಈ ರೀತಿ ಚೆಕ್ ಮಾಡಬಹುದು.ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೆ ನಿಮಗೆ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಸೌಲಭ್ಯ ಸಿಗಲ್ಲ.

ಕಳೆದ 6 ತಿಂಗಳಿನಿಂದ ಪಡಿತರ ಪಡೆಯದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ.

ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೋ ಇಲ್ವೋ ಈ ರೀತಿ ಚೆಕ್ ಮಾಡಿ

1) ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೋ ಇಲ್ವೋ ಅಂತ ಪರಿಶೀಲಿಸಲು ಬಯಸಿದರೆ ಮೊದಲು https://ahara.kar.nic.in/Home/Home ಈ ವೆಬ್ ಸೈಟ್ ಗೆ ಭೇಟಿ ನೀಡಿ. ನೀವು ಮೊಬೈಲ್ ನಲ್ಲಿ ನೋಡುತ್ತಿದ್ದರೆ ಡೆಸ್ಕ್ ಟಾಪ್ ವೀವ್ (desk top view) ಎನ್ನುವ ಆಯ್ಕೆಯನ್ನು ಸೆಲೆಕ್ಟ್ (select) ಮಾಡಿಕೊಳ್ಳಿ.

2)  ವೆಬ್ಸೈಟ್ಗೆ ಹೋದ ನಂತರ, ನೀವು ಪಡಿತರ ಚೀಟಿಯ ಆಯ್ಕೆಯನ್ನು ಆರಿಸಬೇಕು
3) ನಂತರ ನೀವು ‘ರಾಜ್ಯ ಪೋರ್ಟಲ್ಗಳಲ್ಲಿ ಪಡಿತರ ಚೀಟಿ ವಿವರಗಳು’ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
4) ನಂತರ ನಿಮ್ಮ ಪಡಿತರ ಚೀಟಿ ಇರುವ ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿ
5) ಇದರ ನಂತರ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಬೇಕು ಮತ್ತು ನಂತರ ನಿಮ್ಮ ಬ್ಲಾಕ್ ಅನ್ನು ಸಹ ಆಯ್ಕೆ ಮಾಡಬೇಕು
6) ನಂತರ ನೀವು ನಿಮ್ಮ ಪಂಚಾಯತ್ ಅನ್ನು ಸಹ ಆಯ್ಕೆ ಮಾಡಬೇಕು
7) ಈಗ ನೀವು ನಿಮ್ಮ ಪಡಿತರ ಅಂಗಡಿಯ ಹೆಸರು ಮತ್ತು ಪಡಿತರ ಚೀಟಿಯ ಪ್ರಕಾರವನ್ನು ಸಹ ಹೇಳಬೇಕು
8) ನಂತರ ಒಂದು ಪಟ್ಟಿ ನಿಮ್ಮ ಮುಂದೆ ಕಾಣಿಸಿಕೊಳ್ಳುತ್ತದೆ
9) ಈ ಪಟ್ಟಿಯಲ್ಲಿ ಪಡಿತರ ಚೀಟಿದಾರರ ಹೆಸರುಗಳಿವೆ
10) ಈಗ ನೀವು ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಹುಡುಕಬೇಕು
11) ನಂತರ ಹುಡುಕಿದ ಹೆಸರು ಪಟ್ಟಿಯಲ್ಲಿ ಹೆಸರು ಇದ್ದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಸೇರ್ಪಡೆಯಾಗಿದೆ ಅಂತ ಅರ್ಥ. ಆದರೆ ಪಡಿತರ ಚೀಟಿಯಲ್ಲಿ ಹೆಸರು ಇಲ್ಲದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದು ಮಾಡಲಾಗಿದೆ ಅಂತ ಅರ್ಥ.
12) ಒಂದು ವೇಳೆ ನೀವು ನಿಮ್ಮ ಪಡಿತರ ಚೀಟಿಯಲ್ಲಿ ಯಾವುದೇ ಲೋಪದೋಷ ಇಲ್ಲದೆ ಇದ್ದರೂ ಕೂಡ ನಿಮ್ಮ ಹೆಸರು ಬಂದಿದ್ದರೆ ತಕ್ಷಣಕ್ಕೆ ಆಹಾರ ಇಲಾಖೆಯ ಕಚೇರಿಗೆ ಹೋಗಿ ರೇಷನ್ ಕಾರ್ಡ್ ರದ್ದುಪಡಿಸಿರುವುದನ್ನು ಮರು ಪರಿಶೀಲನೆ ಮಾಡುವಂತೆ ಮತ್ತೊಂದು ಅರ್ಜಿ ಸಲ್ಲಿಸಬೇಕು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read