HomeKarnatakaಬೇರೆ ಇಲಾಖೆಗೆ ನಿಯೋಜನೆ ರದ್ದು: ಮೂಲ ಹುದ್ದೆಗೆ ಮರಳಲು ಕಂದಾಯ ಇಲಾಖೆ ಸುತ್ತೋಲೆ

ಬೇರೆ ಇಲಾಖೆಗೆ ನಿಯೋಜನೆ ರದ್ದು: ಮೂಲ ಹುದ್ದೆಗೆ ಮರಳಲು ಕಂದಾಯ ಇಲಾಖೆ ಸುತ್ತೋಲೆ

ಬೆಂಗಳೂರು: ಅನ್ಯ ಕರ್ತವ್ಯ, ನಿಯೋಜನೆ ಮೇಲೆ ಇರುವ ಕಂದಾಯ ಇಲಾಖೆಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳನ್ನು ಬಿಡುಗಡೆಗೊಳಿಸಿ ನೇಮಕವಾದ ಮೂಲಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಕೂಡಲೇ ಸೂಚಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಜನವರಿ 27 ರೊಳಗೆ ಮೂಲ ಹುದ್ದೆಗೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದ್ದಾರೆ.

ಕಂದಾಯ ಇಲಾಖೆ ಸೇವೆಗಳನ್ನು ಡಿಜಿಟಲೀಕರಣ ಮಾಡುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ವಿಎಗಳು ಬೇರೆ ಸ್ಥಳದಲ್ಲಿ ಕೆಲಸ ಮಾಡುವುದರಿಂದ ಕಚೇರಿ ಸಿಬ್ಬಂದಿ ಮೇಲೆ ಹೆಚ್ಚು ಕಾರ್ಯದ ಒತ್ತಡ ಉಂಟಾಗುತ್ತಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಗಳು ಕೂಡಲೇ ವಿಎಗಳನ್ನು ಬಿಡುಗಡೆಗೊಳಿಸಬೇಕೆಂದು ಸೂಚಿಸಲಾಗಿದೆ. ಸೂಚನೆ ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular