
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ, ಭಾಷಣ ಮಾಡಿದಂತ ಆರೋಪದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ನಂತರ ನಡ್ಡಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣವನ್ನು ಇಂದು ಹೈಕೋರ್ಟ್ ರದ್ದುಗೊಳಿಸಿದೆ.
ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ಪ್ರಚಾರ ಭಾಷಣದ ಸಂದರ್ಭದಲ್ಲಿ ಜೆ.ಪಿ ನಡ್ಡಾ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಭಾಷಣ ಮಾಡಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ ಏಕಸದಸ್ಯ ಪೀಠ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.

