ಕೆಎಎಸ್ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಆನ್ಸರ್ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ಸೆ. 4 ಕೊನೆ ದಿನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ:27-08-2024ರಂದು ನಡೆಸಿದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ(ಆರ್.ಪಿ.ಸಿ.ವೃಂದ ಮತ್ತು ಹೈ.ಕ. ವೃಂದ) ಪೂರ್ವಭಾವಿ ಪರೀಕ್ಷೆಯ ಪತ್ರಿಕೆ-1 (ವಿಷಯ ಸಂಕೇತ-578) ಮತ್ತು ಪತ್ರಿಕೆ-1 (ವಿಷಯ ಸಂಕೇತ-579)ರ ಕೀ-ಉತ್ತರಗಳನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಸದರಿ “ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ದಿನಾಂಕ:04-09-2024ರಂದು ಸಂಜೆ 5-30 ರೊಳಗಾಗಿ ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 ಈ ವಿಳಾಸಕ್ಕೆ ಮಾತ್ರ ತಲುಪುವಂತೆ ಕಳುಹಿಸತಕ್ಕದ್ದು, ಆಕ್ಷೇಪಣೆಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ: 04-09-2024ರ ಸಂಜೆ 5:30 ಆಗಿದ್ದು, ಈ ಅವಧಿಯ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳ ಆಕ್ಷೇಪಣೆಗಳು ಅಂಚೆಯ ಮೂಲಕ ಆಯೋಗಕ್ಕೆ ತಲುಪಲು ವಿಳಂಬವಾದಲ್ಲಿ ಕೆ.ಪಿ.ಎಸ್.ಸಿ.ಯು ಜವಾಬ್ದಾರಿಯಾಗಿರುವುದಿಲ್ಲ.

ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಆಯೋಗದ ಜಾಲತಾಣದಲ್ಲಿ ಪ್ರಕಟಿಸಿರುವ ನಮೂನೆಯಲ್ಲಿಯೇ (ಕನ್ನಡ ಅಥವಾ ಇಂಗ್ಲೀಷ್) ಸಲ್ಲಿಸಬೇಕು.

ಆಕ್ಷೇಪಣೆಗಳನ್ನು ಸಲ್ಲಿಸುವ ಪ್ರತಿ ಪ್ರಶ್ನೆಗೆ 50 ರೂ. ಶುಲ್ಕವನ್ನು (ಐ.ಪಿ.ಓ ಅಥವಾ ಡಿ.ಡಿ. ಮೂಲಕ) ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು, ಇವರ ಹೆಸರಿಗೆ ಸಂದಾಯ ಮಾಡಬೇಕು.

ಶುಲ್ಕ ಸಂದಾಯ ಮಾಡದ ಆಕ್ಷೇಪಣಾ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಪ್ರತಿ ಪ್ರಶ್ನೆಯ ಕೀ ಉತ್ತರಕ್ಕೆ ಸಲ್ಲಿಸುವ ಆಕ್ಷೇಪಣೆಗಳಿಗೆ ಪೂರಕವಾಗಿ ಸಲ್ಲಿಸುವ ದಾಖಲೆಗಳಿಗೆ ಸಂಬಂಧಿಸಿದಂತೆ ಲೇಖಕರ ಹೆಸರು, ಪ್ರಕಾಶನದ ಪ್ರತಿ ಇತ್ಯಾದಿ ವಿವರಗಳನ್ನು ಆಕ್ಷೇಪಣೆಗಳೊಂದಿಗೆ ನಿಗದಿತ ನಮೂನೆಯಲ್ಲಿ ನಮೂದಿಸತಕ್ಕದ್ದು.

ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು.

ದಾಖಲೆಗಳ ಪ್ರತಿ ಪುಟದ ಮೇಲೆ ಪ್ರಶ್ನೆ ಸಂಖ್ಯೆ ಮತ್ತು ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯತಕ್ಕದ್ದು.

ಆಕ್ಷೇಪಣೆಯೊಂದಿಗೆ ಅಭ್ಯರ್ಥಿಯು ದೃಢೀಕರಿಸಿದ ಪ್ರವೇಶ ಪತ್ರದ ಪ್ರತಿಯನ್ನು ಪರಿಶೀಲನೆಗಾಗಿ ಲಗತ್ತಿಸಬೇಕು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read