HomeKarnatakaSSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಪ್ರಧಾನ ಮಂತ್ರಿ ಇಂಟರ್ನ್ ಶಿಪ್...

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ತರಬೇತಿಗೆ ಅರ್ಜಿ

ದಾವಣಗೆರೆ: ಡೇ-ನಲ್ಮ್ ಅಭಿಯಾನದಡಿ ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಕಾರ್ಯಕ್ರಮದಡಿ  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಇತರೆ ಪದವಿ ವಿದ್ಯಾರ್ಹತೆ ಹೊಂದಿರುವ ಇಚ್ಚೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಯೋಜನೆಯಡಿ ಪ್ರತಿಷ್ಟಿತ ಕಂಪನಿಗಳಿಂದ ಉದ್ಯೋಗಾಧಾರಿತ ಕೌಶಲ್ಯ ಹಾಗೂ ಇಂಟರ್ನ್ ಶಿಪ್ ಅವಕಾಶ ಒದಗಿಸುವುದರ ಮೂಲಕ ನವೀನ ರೀತಿಯ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ. ಅಲ್ಲದೇ ತರಬೇತಿ ಅವಧಿಯಲ್ಲಿ ಮಾರ್ಗಸೂಚಿಯನುಸಾರ 5 ಸಾವಿರ ರೂ. ಶಿಷ್ಯವೇತನ ನೀಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ಪಿಎಂಇ ಜಾಲತಾಣ https://pmintrnship.mca.gov.in/login ನಲ್ಲಿ ಇದೇ ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ಡೇ-ನಲ್ಮ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular