ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಏಪ್ರಿಲ್ 21, 2026 ರಂದು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನನ್ನು ತಪಾಸಣೆ ನಡೆಸಿದಾಗ ಈ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ.
ಪ್ರಯಾಣಿಕನ ‘ಚೆಕ್-ಇನ್’ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟಿದ್ದ 13.69 ಕೆಜಿ ಹೈಡ್ರೋಪೋನಿಕ್ ಗಾಂಜಾ (Hydroponic Ganja) ಪತ್ತೆಯಾಗಿದೆ ಜಪ್ತಿ ಮಾಡಲಾದ ಮಾದಕ ವಸ್ತುವಿನ ಅಂದಾಜು ಮಾರುಕಟ್ಟೆ ಮೌಲ್ಯ ಸುಮಾರು ₹4.79 ಕೋಟಿ ಎಂದು ಅಂದಾಜಿಸಲಾಗಿದೆ.
ಆರೋಪಿಯನ್ನು ತಕ್ಷಣವೇ ವಶಕ್ಕೆ ಪಡೆದ ಅಧಿಕಾರಿಗಳು, ಮಾದಕ ದ್ರವ್ಯ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಬ್ಯಾಂಕಾಕ್‌ನಿಂದ ಇತ್ತೀಚಿನ ದಿನಗಳಲ್ಲಿ ಇಂತಹ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ. ಈ ಜಾಲದ ಹಿಂದಿರುವ ಇತರ ವ್ಯಕ್ತಿಗಳ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

