HomeKarnatakaಬೆಳ್ಳಂಬೆಳಗ್ಗೆ ಅಪಘಾತ: ಕ್ಯಾಂಟರ್ ಹರಿದು ಕೆಲಸಕ್ಕೆ ತೆರಳುತ್ತಿದ್ದ ಪೌರ ಕಾರ್ಮಿಕ ಸಾವು

ಬೆಳ್ಳಂಬೆಳಗ್ಗೆ ಅಪಘಾತ: ಕ್ಯಾಂಟರ್ ಹರಿದು ಕೆಲಸಕ್ಕೆ ತೆರಳುತ್ತಿದ್ದ ಪೌರ ಕಾರ್ಮಿಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಪೌರಕಾರ್ಮಿಕನ ತಲೆ ಮೇಲೆ ಕ್ಯಾಂಟರ್ ಹರಿದಿದೆ. ಪೌರಕಾರ್ಮಿಕ ಗಂಗಾಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಟಿ. ದಾಸರಹಳ್ಳಿಯ ಕೆರೆ ರಸ್ತೆಯಲ್ಲಿ ಘಟನೆ ನಡೆದಿದೆ. ಅಪಘಾತದ ಬಳಿಕ ಸ್ಥಳದಲ್ಲೇ ಕ್ಯಾಂಟರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಗಾಧರ್ ಕೆಲಸದ ಸ್ಥಳದಲ್ಲಿದ್ದ ವೇಳೆ ಅತಿವೇಗವಾಗಿ ಕ್ಯಾಂಟರ್ ಚಾಲನೆ ಮಾಡಿಕೊಂಡು ಬಂದ ಚಾಲಕ ಡಿಕ್ಕಿ ಹೊಡೆಸಿದ್ದಾನೆ. ಇದರಿಂದಾಗಿ ಕೆಳಗೆ ಬಿದ್ದ ಗಂಗಾಧರ್ ತಲೆ ಮೇಲೆಯೇ ಕ್ಯಾಂಟರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟರ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular