ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಕ್ಯಾಂಟರ್ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಯಲಬುರ್ಗಾ ತಾಲೂಕಿನ ಕಟಿಗೆಹಳ್ಳಿ ಗ್ರಾಮದ ಹುಚ್ಚಪ್ಪ ಮತ್ತು ಗೋವಿಂದ ಮೃತಪಟ್ಟವರು ಎಂದು ಹೇಳಲಾಗಿದೆ. ಸೊಲ್ಲಾಪುರದಿಂದ ಹೊಸಪೇಟೆ ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ರಸ್ತೆ ಪಕ್ಕದಲ್ಲಿ ನಿಂತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಡಿಕ್ಕಿ ರಭಸಕ್ಕೆ ಕ್ಯಾಂಟರ್ ನಲ್ಲಿದ್ದ ಡೀಸೆಲ್ ಸೋರಿಕೆಯಾಗಿ ರಸ್ತೆಗೆ ಚೆಲ್ಲಿದ್ದು ಬೆಂಕಿ ಕಾಣಿಸಿಕೊಂಡಿದೆ. ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಲಾಗಿದೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

