ಕೋಲಾರ: ಕೋಲಾರ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಕ್ಯಾಂಟರ್ ನಲ್ಲೇ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹನುಮಂತು(21) ಆತ್ಮಹತ್ಯೆಗೆ ಶರಣಾದ ಚಾಲಕ ಎಂದು ಹೇಳಲಾಗಿದೆ. ಅವರು ರಾಯಚೂರು ಜಿಲ್ಲೆ ಸುರಪುರ ತಾಲೂಕಿನ ಕನ್ನಹಳ್ಳಿ ಗ್ರಾಮದವರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.