ಕೇಪ್ ವರ್ಡೆ: ಪ್ರವಾಸಿಗರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 25 ಜನರು ಮ್ರಿತಪಟ್ಟಿದ್ದು. ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಫ್ರಿಕಾದ ದ್ವೀಪರಾಷ್ಟ್ರ ಕೇಪ್ ವರ್ಡೆಯ ಫೋಗೊ ದ್ವೀಪದಲ್ಲಿ ಸಂಭವಿಸಿದೆ.
ಬಸ್ ದುರಂತದಲ್ಲಿ 25 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರಲ್ಲಿ ಹೆಚ್ಚಿನವರು ಯುವಕರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಮತ್ತು ಅಧಿಕಾರಿಗಳು ತಿಳಿಸಿದ್ದಾರೆ. ಫೋಗೊ ದ್ವೀಪದ ಪರ್ವತ ಪ್ರದೇಶವಾದ ಕ್ಯಾಂಪನಾಸ್ ಡಿ ಸಿಮಾ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ.
ಕೇಪ್ ವರ್ಡೆ ಅಧ್ಯಕ್ಷ ಜೋಸ್ ಮಾರಿಯಾ ಪೆರೇರಾ ನೆವೆಸ್ ತಮ್ಮ ಫೇಸ್‌ಬುಕ್ ಪುಟದಲ್ಲಿ ನೀಡಿದ ಹೇಳಿಕೆಯಲ್ಲಿ ಅಪಘಾತವನ್ನು “ಒಂದು ದೊಡ್ಡ ದುರಂತ” ಎಂದು ಕರೆದಿದ್ದಾರೆ. ಅಲ್ಲದೇ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಏಳು ಶವಗಳನ್ನು ತಕ್ಷಣವೇ ಅವುಗಳ ಸ್ಥಿತಿಯ ಕಾರಣ ಸಮಾಧಿ ಮಾಡಲಾಗಿದೆ ಎಂದು ದ್ವೀಪದ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೆಹಲಿಯಲ್ಲಿ ಪಿಜಿ ಕಟ್ಟಡ ಕುಸಿತ ಪ್ರಕರಣ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ: ಅವಶೇಷಗಳಡಿ ಸಿಲುಕಿದವರಿಗಾಗಿ ಮುಂದುವರಿದ ಶೋಧ
ನವದೆಹಲಿ: ನೈಋತ್ಯ ದೆಹಲಿಯಲ್ಲಿ ಪಿಜಿ ಕಟ್ಟಡ ಕುಸಿದು ಬಿದ್ದು ಸಂಭವಿಸಿದ ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರುಗಾಗಿ ಶೋಧ ಕಾರ್ಯಾಅಚರಣೆ ಮುಂದುವರೆದಿದೆ.
ನೈಋತ್ಯ ದೆಹಲಿಯ ದೆಹಲಿ ವಿವಿ ಸೌತ್ ಕ್ಯಂಪಸ್ ಬಳಿಯ ಸತ್ಯನಿಕೇತನ ಪ್ರದೇಶದಲ್ಲಿರುವ ಬಾಯ್ಸ್ ಪಿಜಿ ಇಂದು ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದೆ. ಐದು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಇದಾಗಿದ್ದು, ಕಟ್ಟಡ ಕುಸಿದ ರಭಸಕ್ಕೆ ಪಕ್ಕದಲ್ಲಿದ್ದ ಮತ್ತೊಂದು ಕಟ್ಟಡ ಕೂಡ ಕುಸಿದು ಬಿದ್ದಿದೆ.
ದುರಂತದಲ್ಲಿ ಈವರೆಗೆ ಆರು ಜನರನ್ನು ರಕ್ಷಿಸಲಾಗಿದ್ದು, ಅವರಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಲ್ಲಿ ನಾಲ್ವರನ್ನು ಏಮ್ಸ್ ಟ್ರಾಮಾ ಸೆಂಟರ್ ಗೆ ದಾಖಲಿಸಲಾಗಿದೆ. ಓರ್ವನ್ನನು ಸಪ್ತರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಕಟ್ಟಡ ಕುಸಿತದಲ್ಲಿ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ. NSUI, AISA ವಿದ್ಯಾರ್ಥಿ ಸಂಘಟನೆ, ೧೨ ಅಗ್ನಿಶಾಮಕ ವಾಹನ ಸಿಬ್ಬಂದಿಗಳು, ಪೊಲೀಸರು, ರಕ್ಷಣಾ ತಂದಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ದೆಹಲಿ ವಿಶ್ವ ವಿದ್ಯಾಲಯ ಬಳಿಯ ಪಿಜಿ ಕಟ್ಟಡ ಇದಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಪಿಜಿಯಲ್ಲಿ ವಾಸವಾಗಿದ್ದರು ಎಂದು ತಿಳಿದುನಂದಿದೆ.
ಸದ್ಯದ ಮಾಹಿತಿ ಪ್ರಕಾರ ಈ ಪಿಜಿ ಕಟ್ಟಡ ಆನಂದ್ ಬನ್ಸಾಲ್ ಎಂಬುವವರಿಗೆ ಸೇರಿದ ಕಟ್ಟಡ ಎಂದು ತಿಳಿದುಬಂದಿದೆ. ಕಟ್ಟಡ ಕುಸಿದ ವೇಳೆ 50 ಯುವಕರು ಈ ಕಟ್ಟಡದಲ್ಲಿ ಇದ್ದರು. 70 ಹಾಸಿಗೆಗಳಿರುವ ಪಿಜಿ ಕಟ್ಟಡ ಇದಾಗಿದೆ.
ದುರಂತದ ಬಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಲೆಫ್ಟಿನೆಂಟ್ ಗವರ್ನರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚನೆ ನೀಡಿದ್ದಾರೆ.

