ಮಂಗಳೂರು: ಫುಟ್ ಪಾತ್ ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ ಸರ್ಕಲ್ ಬಳಿ ಎನ್ ಜಿ ವೃತ್ತದ ಫುಟ್ ಪಾತ್ ಗೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಸ್ಥಳದಲ್ಲೇ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ.
ರಮ್ಯಾ (23), ರವಿ (64) ನಂಜಮ್ಮ (75) ಮೃತರು. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರಿನ ಪೀಣ್ಯ ನಿವಾಸಿಗಳು. ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ಸುಬ್ರಹ್ಮಣ್ಯ, ಕಿರಣ್ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
