ಚಿಕ್ಕಮಗಳೂರು: ರಸ್ತೆ ತಿರುವಿನಲ್ಲಿ ಕಾರು ಪಲ್ಟಿಯಾಗಿ ನಾಲ್ವರು ಶಿಕ್ಷಕರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೆಬೈಲು ಗ್ರಾಮದಲ್ಲಿ ನಡೆದಿದೆ.
ರಸ್ತೆ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಕಾರಿನಲ್ಲಿ ಕೊಗ್ರೆ ಸರ್ಕಾರಿ ಶಾಲೆಯ ಶಿಕ್ಷಕರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ನಾಲ್ವರು ಶಿಕ್ಷಕರು ಗಾಯಗೊಂಡಿದ್ದಾರೆ.
ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.