HomeKarnatakaBREAKING NEWS: ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

BREAKING NEWS: ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

ರಾಮನಗರ: ಮರಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿಯಲ್ಲಿ ನಡೆದಿದೆ.

ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಸೇರಿ ಐವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಸಾಕುನಾಯಿ ಮಾತ್ರ ಬಚಾವ್ ಆಗಿದೆ.

ಮೃತ ಐವರೂ ಕುಣಿಗಲ್ ಮೂಲದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular