ಬೆಂಗಳೂರು: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಬಳಿ ನಡೆದಿದೆ.
ಬೊಲೆರೋ ಹಾಗೂ ಸ್ವಿಫ್ಟ್ ವಾಹಗಾನಗಳ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಗಗನ್ (27) ಹಾಗೂ ದರ್ಶನ್ (26) ಮೃತ ಯುವಕರು. ಚನ್ನಪಟ್ಟಣ ಮೂಲದ ಗಗನ್ ಮಾದನಾಯಕನಹಳ್ಳಿ ಬಳಿ ಖಾಸಗಿ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ. ದರ್ಶನ್ ತನ್ನ ಸ್ನೇಹಿತನ ಮನೆಗೆ ಎಲೆಕ್ಟ್ರಾನಿಕ್ ಸಿಟಿಯತ್ತ ತೆರಳುತ್ತಿದ್ದ. ಈ ವೇಳೆ ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

