HomeKarnatakaBIG NEWS: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರು; ಮೂವರು ಸ್ಥಳದಲ್ಲೇ ದುರ್ಮರಣ

BIG NEWS: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರು; ಮೂವರು ಸ್ಥಳದಲ್ಲೇ ದುರ್ಮರಣ

ಮಂಡ್ಯ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ.

ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ (32) ಹಾಗೂ ಚಿರಂಜೀವಿ (32) ಮೃತ ದುರ್ದೈವಿಗಳು. ಸಾಗರ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ತಡರಾತ್ರಿ ಈ ದುರಂತ ಸಂಭವಿಸಿದೆ. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular