HomeKarnatakaBREAKING NEWS: ಕಂದಕಕ್ಕೆ ಉರುಳಿದ ಕಾರು: ಮೂವರು ಸ್ಥಳದಲ್ಲೇ ದುರ್ಮರಣ

BREAKING NEWS: ಕಂದಕಕ್ಕೆ ಉರುಳಿದ ಕಾರು: ಮೂವರು ಸ್ಥಳದಲ್ಲೇ ದುರ್ಮರಣ

ಮಂಗಳೂರು: ಆಲ್ಟೋ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ.

ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು. ಮೃತರು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು. ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿ ಬಿದ್ದು, ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular