HomeKarnatakaದಾರುಣ ಘಟನೆ: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವು,...

ದಾರುಣ ಘಟನೆ: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವು, ಮೂವರು ಗಂಭೀರ

ರಾಮನಗರ: ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವು ಕಂಡ ಘಟನೆ ರಾಮನಗರ- ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಟ್ಯೂಷನ್ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಐವರು ಮಕ್ಕಳ ಮೇಲೆ ಟಾಟಾ ಏಸ್ ಗೂಡ್ಸ್ ವಾಹನ ಹರಿದಿದೆ. ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಕಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದನೇ ತರಗತಿಯ ರೋಹಿತ್, ಎರಡನೇ ತರಗತಿಯ ಶಾಲಿನಿ ಮೃತಪಟ್ಟ ಮಕ್ಕಳು ಎಂದು ಹೇಳಲಾಗಿದೆ. ಸುಚಿತ್, ಗೌತಮಿ, ಲೇಖನಾ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ಮಕ್ಕಳು ರಸ್ತೆ ದಾಟುವಾಗ ವೇಗವಾಗಿ ಬಂದ ಗೂಡ್ಸ್ ವಾಹನ ಮಕ್ಕಳ ಮೇಲೆ ಹರಿದಿದೆ. ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular