HomeKarnatakaಭೀಕರ ಕಾರು ಅಪಘಾತ: ಚಾಲಕ ಸ್ಥಳದಲ್ಲೇ ದುರ್ಮರಣ

ಭೀಕರ ಕಾರು ಅಪಘಾತ: ಚಾಲಕ ಸ್ಥಳದಲ್ಲೇ ದುರ್ಮರಣ

ಮಂಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.

ಪ್ರಜ್ವಲ್ ನಾಯಕ್ (35) ಮೃತ ದುರ್ದೈವಿ. ಈತ ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಎಂದು ತಿಳಿದುಬಂದಿದೆ. ಉಜಿರೆ ಕಾಲೇಜು ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಬಳಿಕ ಬೀದಿ ದೀಪದ ಕಂಬಕ್ಕೆ ಡಿಕ್ಕಿಯಾಗಿದೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವಿದ್ಯುತ್ ಕಂಬ ಬುಡಸಮೇತ ಕಿತ್ತು ಬಿದ್ದಿದೆ. ಕಾರಿನಲ್ಲಿದ್ದ ಪ್ರಜ್ವಲ್ ನಾಯಕ್ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ತಕ್ಷಣ ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular