HomeKarnatakaಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ

ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಬೊಮ್ಮಕ್ಕನಹಳ್ಳಿ ಬಳಿ ನಡೆದಿದೆ.

ಮೃತರು ಯಾದಗಿರಿ ಮೂಲದ ಮೌಲಾ(35), ರೆಹಮಾನ್(15) ಎಂದು ಗುರುತಿಸಲಾಗಿದೆ. ಫಾತಿಮಾ ಬೇಗಂ, ಸಲೀಮಾ ಬೇಗಂ ಹಾಗೂ ಸಮೀ‌ರ್ ಎಂಬುವವರು ಗಾಯಗೊಂಡಿದ್ದು, ಅವರನ್ನು ಬಳ್ಳಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಬೆಂಗಳೂರಿಂದ ಯಾದಗಿರಿಗೆ ತೆರಳುತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿ ದುರಂತ ಸಂಭವಿಸಿದೆ. ರಾಂಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular