ದಾವಣಗೆರೆ: ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಮುಷ್ಟೂರು-ಕಡಬನಕಟ್ಟೆ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. 45 ವರ್ಷದ ರಘುನಾಥ್ ಮೃತ ಇನ್ಸ್ ಪೆಕ್ಟರ್. ರಘುನಾಥ್ ಅವರು ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಡಿಸಿಆರ್ ಇ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಚಿತ್ರದುರ್ಗದಿಂದ ಜಗಳೂರು ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಘುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

