HomeIndiaBIG NEWS: ಕಾರು-ಆಟೋ ಭೀಕರ ಅಪಘಾತ: 6 ಜನರು ದುರ್ಮರಣ

BIG NEWS: ಕಾರು-ಆಟೋ ಭೀಕರ ಅಪಘಾತ: 6 ಜನರು ದುರ್ಮರಣ

ಪಾಟ್ನಾ: ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದ ಬೆಗುಸರಾಯ್ ನಲ್ಲಿ ನಡೆದಿದೆ.

ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ರತನ್ ಚೌಕ್ ಬಳಿ ಕಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ರಕ್ತಸಿಕ್ತ ಮೃತದೇಹಗಳು ರಸ್ತೆಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶಿಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular