HomeKarnatakaದಾರುಣ ಘಟನೆ: ಕಾರ್ ರಿವರ್ಸ್ ತೆಗೆಯುವಾಗ ಚಕ್ರಕ್ಕೆ ಸಿಲುಕಿ ಮಗು ಸಾವು

ದಾರುಣ ಘಟನೆ: ಕಾರ್ ರಿವರ್ಸ್ ತೆಗೆಯುವಾಗ ಚಕ್ರಕ್ಕೆ ಸಿಲುಕಿ ಮಗು ಸಾವು

ಬೆಳಗಾವಿ: ಕಾರ್ ರಿವರ್ಸ್ ತೆಗೆಯುವ ವೇಳೆ ಕಾರ್ ನ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಖಜಗೌಡನಟ್ಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಅನುಶ್ರೀ ರಾಮಕೃಷ್ಣ ಖೋತ(2) ಮೃತಪಟ್ಟ ಮಗು. ಪಕ್ಕದ ಮನೆಯ ಬಸವರಾಜ ಖೋತ ಅವರು ತಮ್ಮ ಕಾರ್ ರಿವರ್ಸ್ ತೆಗೆದುಕೊಳ್ಳುವ ವೇಳೆ ಘಟನೆ ನಡೆದಿದೆ. ಮನೆ ಬಳಿ ಆಟವಾಡಿಕೊಂಡಿದ್ದ ಮಗು ಆಕಸ್ಮಿಕವಾಗಿ ಹಿಂದೆ ಬರುತ್ತಿದ್ದ ಕಾರ್ ಚಕ್ರದ ಅಡಿಗೆ ಸಿಲುಕಿ ಮೃತಪಟ್ಟಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular