HomeKarnatakaಬೆಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ಏಕಾಏಕಿ ಹೊತ್ತಿ ಉರಿದ ಕಾರು

ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ಏಕಾಏಕಿ ಹೊತ್ತಿ ಉರಿದ ಕಾರು

ಬೆಂಗಳೂರು: ಚಲಿಸುತ್ತಿದ್ದ ಕಾರು ನಡುರಸ್ತೆಯಲ್ಲಿಯೇ ಏಕಾಏಕಿ ಹೊತ್ತಿ ಉರಿದ ಘಟನೆ ಬೆಂಗಳೂರು-ಹೊಸೂರು ರಸ್ತೆಯಲ್ಲಿ ನಡೆದಿದೆ.

ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಈ ಘಟನೆ ನಡೆದಿದೆ. ಕ್ರೇಟಾ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಕಾರು ಚಾಲಕ ಹಾಗೂ ಇತರರು ರಸ್ತೆ ಮಧ್ಯೆಯೇ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಅಷ್ಟರಲ್ಲೇ ಕಾರು ಧಗಧಗನೆ ಹಿತ್ತಿ ಉರಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೊಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular