BIG NEWS: ಕಾರು- ಬೈಕ್ ಭೀಕರ ಅಪಘಾತ: ASI ಪುತ್ರಿ ದುರ್ಮರಣ

ಉಡುಪಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಎಸ್ ಐ ಪುತ್ರಿಯೊಬ್ಬರು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ನಿಟ್ಟೂರು ಕೆ.ಎಸ್.ಆರ್.ಟಿ.ಸಿ ಡಿಪೋ ಬಳಿ ಈ ಅಪಘಾತ ಸಂಭವಿಸಿದೆ. ಸ್ಪರ್ಶ (24) ಮೃತ ಯುವತಿ. ಶಿರ್ವ ಪೊಲೀಸ್ ಠಾಣೆಯ ಎಎಸ್ ಐ ಸುದೇಶ್ ಶಟ್ಟಿ ಅವರ ಮಗಳು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಸ್ಪರ್ಶ ತಾಯಿ ಶರ್ಮಿಳಾ ಗಂಭೀರವಾಗಿ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೈಪಾಸ್ ರಸ್ತೆಯಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಕಾರು ಬೈಕ್ ಗೆಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read