HomeKarnatakaBREAKING NEWS: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಕಾರು-ಬೈಕ್

BREAKING NEWS: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಕಾರು-ಬೈಕ್

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದ ರಭಸಕ್ಕೆ ಕಾರು ಮತ್ತು ದ್ವಿಚಕ್ರ ವಾಹನ ರಸ್ತೆಪಕ್ಕದ ಕಂದಕಕ್ಕೆ ಬಿದ್ದಿವೆ. ಅಪಘಾತದಲ್ಲಿ ಕಾರಿನಲ್ಲಿದ್ದ ಒರ್ವ ಹಾಗೂ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular