HomeAutoಕಾರು-ಬೈಕ್ ಡಿಕ್ಕಿ: ಓರ್ವ ಯುವತಿ ಸ್ಥಳದಲ್ಲೇ ಸಾವು, ಇನ್ನೋರ್ವಳ ಸ್ಥಿತಿ ಗಂಭೀರ

ಕಾರು-ಬೈಕ್ ಡಿಕ್ಕಿ: ಓರ್ವ ಯುವತಿ ಸ್ಥಳದಲ್ಲೇ ಸಾವು, ಇನ್ನೋರ್ವಳ ಸ್ಥಿತಿ ಗಂಭೀರ

ರಾಯಚೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ವಿಜಯದಶಮಿ ಹಬ್ಬದಂದು ರಾತ್ರಿ ತಾತನಿಗೆ ಬನ್ನಿ ಕೊಡಲೆಂದು ಹೋಗಿದ್ದ ಮೊಮ್ಮಕ್ಕಳು ಅಪಘಾತಕ್ಕೀಡಾಗಿದ್ದಾರೆ. ರಾಯಚೂರಿನ ಡಿಸಿ ಬಂಗಲೆ ಬಳಿ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

20 ವರ್ಷದ ಸಾಕ್ಷಿ ಮೃತ ಯುವತಿ. ಇನ್ನೋರ್ವ ಯುವತಿ ಸಂಜನಾ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯದಶಮಿ ಹಬ್ಬ ಹಿನ್ನೆಲೆಯಲ್ಲಿ ರಾತ್ರಿ ತಾತನಿಗೆ ಬನ್ನಿ ಕೊಡಲೆಂದು ಹೋಗಿದ್ದರು. ಬನ್ನಿ ಕೊಟ್ಟು ವಾಪಾಸ್ ಆಗುವಾಗ ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಎಸ್ಕೇಪ್ ಆಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular