ಮಂಡ್ಯ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ.
ಮದ್ದೂರಿನ ಬೆಳಕವಾಡಿ ಬಳಿ ಈ ಘಟನೆ ನಡೆದಿದೆ. ಪ್ರಜ್ವಲ್ (15) ಮೃತ ವ್ಯಕ್ತಿ. ಬೈಕ್ ನಲ್ಲಿದ್ದ ಮತ್ತೋರ್ವ ಹಾಗೂ ಕಾರಿನಲ್ಲಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದುದ್ದು, ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

