ಉಡುಪಿ: ಚಲಿಸುತ್ತಿದ್ದ ಕಾರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಾವುಂದ ಫ್ಲೈಓವರ್ ಮೇಲೆ ಗುರುವಾರ ನಡೆದಿದೆ.
ಕುಂದಾಪುರದ ಕಟ್ಕೆರೆಯಿಂದ ಕಾರ್ ನಲ್ಲಿ ಉಪ್ಪಂದಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಏಕಾಏಕಿ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರು ಚಾಲಕ ನಿತೇಶ್ ಮತ್ತು ಚಂದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಈ ಮಾರ್ಗದ ರಸ್ತೆಯಲ್ಲಿ ದಟ್ಟ ಹೊಗೆ ಆವರಿಸಿ ಕೆಲ ಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಬೈಂದೂರು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
