BREAKING: ಹೊಸ ವರ್ಷದ ಪಾರ್ಟಿಯಿಂದ ತೆರಳುವಾಗ ಘೋರ ದುರಂತ; KSRTC ಬಸ್-ಕಾರು ಡಿಕ್ಕಿ; ನಾಲ್ವರು ದುರ್ಮರಣ

ಅಂಕೋಲಾ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಅಪಘಾತ ಸಂಭವಿಸಿದ್ದು, ತಮಿಳುನಾಡು ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ಹೊಸ ವರ್ಷದ ಸಂಭ್ರಮದ ಪಾರ್ಟಿ ಮುಗಿಸಿ ಹೊರಟಿದ್ದಾಗ ಈ ದುರಂತ ಸಂಭವಿಸಿದೆ.

ಕೆ.ಎಸ್.ಆರ್.ಟಿ.ಸಿ ಬಸ್, ತಮಿಳುನಾಡು ಮೂಲದ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ ನಾಲ್ವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read