HomeKarnatakaಕಾರ್ ಡಿಕ್ಕಿ: ಅಪಘಾತದಲ್ಲಿ ಮಹಿಳಾ ಟೆಕ್ಕಿ ಸಾವು

ಕಾರ್ ಡಿಕ್ಕಿ: ಅಪಘಾತದಲ್ಲಿ ಮಹಿಳಾ ಟೆಕ್ಕಿ ಸಾವು

ಬೆಂಗಳೂರು: ಬೆಂಜ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ವೇರ್ ಇಂಜಿನಿಯರ್ ಮೃತಪಟ್ಟ ಘಟನೆ ಬೆಂಗಳೂರು -ಮೈಸೂರು ರಸ್ತೆಯ ಕೆಂಗೇರಿ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.

ಬಸವೇಶ್ವರನಗರ ನಿವಾಸಿ ಸಾಫ್ಟ್ವೇರ್ ಇಂಜಿನಿಯರ್ ಸಂಧ್ಯಾ(30) ಮೃತಪಟ್ಟವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಜ್ ಕಾರ್ ಚಾಲಕ ನಾಗರಭಾವಿ ನಿವಾಸಿ ಧನುಷ್ ನನ್ನ ಪೊಲೀಸರು ಬಂಧಿಸಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಂಧ್ಯಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಕೆಂಗೇರಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರ್ ಅನ್ನು ಜಪ್ತಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧನುಷ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಮದ್ಯ ಸೇವಿಸಿರುವುದು ಧೃಡಪಟ್ಟಿದೆ. ಮದ್ಯದ ಅಮಲಿನಲ್ಲಿ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಕಾರ್ ಚಾಲನೆ ಮಾಡಿದ್ದೆ ಅಪಘಾತಕ್ಕೆ ಕಾರಣವೆನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular