HomeKarnatakaBREAKING: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರ್: ಐವರು ವಿದ್ಯಾರ್ಥಿಗಳು ಸೇರಿ 6 ಮಂದಿಗೆ ಗಾಯ

BREAKING: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರ್: ಐವರು ವಿದ್ಯಾರ್ಥಿಗಳು ಸೇರಿ 6 ಮಂದಿಗೆ ಗಾಯ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಹಳ್ಳಕ್ಕೆ ಬಿದ್ದು, ಐವರು ವಿದ್ಯಾರ್ಥಿಗಳು ಸೇರಿ 6 ಮಂದಿ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಚಿಲಕವಾಡ ಗ್ರಾಮದ ಬಳಿ ಘಟನೆ ನಡೆದಿದೆ.

ಕಾರ್ ನಲ್ಲಿದ್ದ ಓರ್ವ ವಿದ್ಯಾರ್ಥಿ, ಮತ್ತೊಬ್ಬ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದೆ. ವಿದ್ಯಾರ್ಥಿಗಳು ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಹೆಚ್ಚುವರಿ ಕ್ಲಾಸ್ ಮುಗಿಸಿ ಹೋಗುವಾಗ ಕಾರ್ ನಲ್ಲಿ ಡ್ರಾಪ್ ಕೇಳಿದ್ದಾರೆ. ಚಿಲಕವಾಡ ಶಾಲೆಯಿಂದ ಸ್ವಲ್ಪ ದೂರ ಹೋದ ತಕ್ಷಣ ಕಾರ್ ಹಳ್ಳಕ್ಕೆ ಬಿದ್ದಿದೆ.

ಅಪಘಾತದಲ್ಲಿ ನಿಂಗನಗೌಡ ಮತ್ತು ಭರ್ಮಪ್ಪ ಕುರಿ ಎಂಬ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ನವಲಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular