ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವರೂರು ಗ್ರಾಮದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳಾಗಿದ್ದಾರೆ.
ಕಾರ್ ನಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.