HomeKarnatakaBREAKING NEWS: ಡಿವೈಡರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

BREAKING NEWS: ಡಿವೈಡರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವರೂರು ಗ್ರಾಮದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳಾಗಿದ್ದಾರೆ.

ಕಾರ್ ನಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular