ಕಾರವಾರ: ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳದ ವೆಂಕಟಾಪುರ ಸಮೀಪ ನಡೆದಿದೆ.
ಭಟ್ಕಳದ ಆಜಾದ್ ನಗರ ನಿವಾಸಿ ಬಿಲಾಲ್(15), ಅಯಾನ್(20) ಮೃತಪಟ್ಟವರು. ಅಪಘಾತದಲ್ಲಿ ಬಿಲಾಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರ್ ಚಾಲನೆ ಮಾಡುತ್ತಿದ್ದ ಅಯಾನ್ ಗಂಭೀರವಾಗಿ ಗಾಯಗೊಂಡು ಉಡುಪಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿರಾಲಿಯಿಂದ ಭಟ್ಕಳಕ್ಕೆ ಕಾರ್ ನಲ್ಲಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

