HomeAutoಕಾರ್ ಮೇಲೆ ತೆಂಗಿನ ಮರ, ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಸಾವು

ಕಾರ್ ಮೇಲೆ ತೆಂಗಿನ ಮರ, ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಸಾವು

ಚಿಕ್ಕಮಗಳೂರು: ಬಿರುಗಾಳಿಗೆ ತೆಂಗಿನ ಮರ, ವಿದ್ಯುತ್ ಕಂಬ ಕಾರ್ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಸಮೀಪ ಲಿಂಗದಹಳ್ಳಿ ಬಳಿ ನಡೆದಿದೆ.

ಚಿಕ್ಕಮಗಳೂರು ತಾಲೂಕು ಮಾಚೇನಹಳ್ಳಿಯ ದೇವರಾಜಾಚಾರ್(38) ಮೃತಪಟ್ಟವರು. ಕಡೂರು ಸಮೀಪದ ಮತಿಘಟ್ಟದಿಂದ ಐದು ಮಂದಿ ತೆರಳುತ್ತಿದ್ದ ವೇಳೆ ಲಿಂಗದಹಳ್ಳಿ ಬಳಿ ಬಿರುಗಾಳಿಯಿಂದಾಗಿ ತೆಂಗಿನ ಮರ ಮತ್ತು ವಿದ್ಯುತ್ ಕಂಬ ವಾಹನದ ಮೇಲೆ ಬಿದ್ದಿವೆ.

ಕಾರ್ ನಲ್ಲಿದ್ದ ದೇವರಾಜಾಚಾರ್ ಮೃತಪಟ್ಟಿದ್ದು, ಕಡೂರು ತಾಲೂಕು ಎರೆಹಳ್ಳಿಯ ಹನುಮಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಹನುಮಪ್ಪನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular