HomeKarnatakaBREAKING: ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣ: ನೇರವಾಗಿ ಕೋರ್ಟ್ ಗೆ ಹಾಜರಾಗಿ ಜಾಮೀನು ಪಡೆದ ರಿಕ್ಕಿ...

BREAKING: ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣ: ನೇರವಾಗಿ ಕೋರ್ಟ್ ಗೆ ಹಾಜರಾಗಿ ಜಾಮೀನು ಪಡೆದ ರಿಕ್ಕಿ ರೈ

ಬೆಂಗಳೂರು: ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಐಷಾರಾಮಿ ಲಾಂಬೊರ್ಗಿನಿ ಕಾರು ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರನ್ನು ಚಲಾಯಿಸುತ್ತಿದ್ದುದು ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಎಂಬುದು ಖಚಿತವಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ರಿಕ್ಕಿ ರೈ ವಿರುದ್ಧ ಕೇಸ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು.

ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚರಣೆಗೆ ಖುದ್ದು ಹಾಜರಾಗುವುದಾಗಿ ತಿಳಿಸಿದ್ದ ರಿಕ್ಕಿ ರೈ, ಇದೀಗ ನೇರವಾಗಿ ಕೋರ್ಟ್ ಗೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ದಿನಗಳ ಹಿಂದೆ ಬೆಂಗಳೂರಿನ ಅನೀಲ್ ಕುಂಬ್ಳೆ ಸರ್ಕಲ್ ನಲ್ಲಿ ಮುಂಜಾನೆ ಲ್ಯಾಂಬೋರ್ಗಿನಿ ಕಾರೊಂದನ್ನು ಡ್ರಿಫ್ಟಿಂಗ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರನ್ನು ಪತ್ತೆ ಮಾಡಿದ್ದಾರು. ಕಾರು ರಿಕ್ಕಿ ರೈ ಅವರ ಸದಾಶಿವನಗರ ನಿವಾಸದಲ್ಲಿ ನಿಲುಗಡೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಅವರಿಗೂ ನೋಟಿಸ್ ಜಾರಿ ಮಾಡಲಾಗಿತ್ತು.

ಕಾರನ್ನು ರಿಕ್ಕಿ ರೈ ಅವರೇ ಓಡಿಸಿದ್ದರೇ? ಎಂಬ ಬಗ್ಗೆ ಖಚಿತವಾಗಿರಲಿಲ್ಲ. ಆದರೆ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ರಿಕ್ಕಿ ರೈ ಅವರೇ ಕಾರು ಡ್ರಿಫ್ಟಿಂಗ್ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕ್ ರೈ ಅವರಿಗೆ ಸಂಕಷ್ಟ ಎದುರಾಗಿತ್ತು. ಇದೀಗ ಕೋರ್ಟ್ ಗೆ ಹಾಜರಾಗಿ ಜಾಅಮೀನು ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಮಾರ್ಚ್ 21ರಂದು ಬೆಳಗಿನಜಾವ ಐಷಾರಾಮಿ ಲಾಂಬೊರ್ಗಿನಿ ಕಾರು ಡ್ರಿಫ್ಟಿಂಗ್ ಮಾಡಿ ಅಪಾಯಕಾರಿಯಾಗಿ ಚಾಲನೆ ಮಾಡಿದ್ದ ಘಟನೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ನಲ್ಲಿ ಬೆಳಕಿಗೆ ಬಂದಿತ್ತು. ಕಾರು ಡ್ರಿಫ್ಟಿಂಗ್ ಕೇಸ್ ಗೆ ಸಂಬಂಧಿಸಿದಂತೆ ಅಪರಿಚಿತ ಕಾರು ಚಾಲಕನ ವಿರುದ್ಧ ಕಬ್ಬನ್ ಪಾರ್ಕ್ ಸಂಚಾರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.

ಬೆಳಗಿನಜಾವ 2 ಗಂಟೆ ಸುಮಾರಿಗೆ ಲಾಂಬೊರ್ಗಿನಿ ಕಾರು ಅನಿಲ್ ಕುಂಬ್ಳೆ ವೃತ್ತದ ಬಳಿ ಬಂದಿತ್ತು. ಈ ವೇಳೆ ಕಾರು ಡ್ರಿಫ್ಟಿಂಗ್ ಮಾಡಲಾಗಿದೆ. ಇದನ್ನು ಕಂಡು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಕಬ್ಬನ್ ಪಾರ್ಕ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

ಸಿಸಿಟಿವಿ ಪರಿಶೀಲನೆ ವೇಳೆ KA-05 NR 0009 ನಂಬರ್​​ನ ಲ್ಯಾಂಬೋರ್ಗಿನಿ ಕಾರು ಎಂಬುದು ಗೊತ್ತಾಗಿದೆ. ಕಾರಿನ ಮಾಲೀಕರನ್ನು ಪತ್ತೆ ಮಾಡಲಾಗುತ್ತಿದ್ದು, ಅಜಾಗರೂಕತೆ ಹಾಗೂ ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಕಾರ್ ಡ್ರಿಫ್ಟಿಂಗ್ ಎಂದರೆ ವಾಹನದ ಹಿಂದಿನ ಚಕ್ರಗಳ ಹಿಡಿತವನ್ನು ಉದ್ದೇಶಪೂರ್ವಕವಾಗಿ ತಪ್ಪಿಸಿ, ತಿರುವುಗಳಲ್ಲಿ ನಿಯಂತ್ರಿತ ರೀತಿಯಲ್ಲಿ ಜಾರುವಂತೆ ಮಾಡುವ ಸಾಹಸಮಯ ಚಾಲನಾ ತಂತ್ರವಾಗಿದೆ. ಈ ಕಲೆಗೆ ಹೆಚ್ಚಿನ ಕೌಶಲ್ಯದ ಅಗತ್ಯವಿದೆ. ವೇಗ, ನಿಯಂತ್ರಣ ಮತ್ತು ಕೌಶಲ್ಯವನ್ನು ಪ್ರದರ್ಶಿಸುವ ಮೋಟಾರ್‌ಸ್ಪೋರ್ಟ್ ಇದಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular