HomeKarnatakaಕಾರು ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಕಾರು ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಮೈಸೂರು: ಕಾರು ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು, ಚಲಿಸುತ್ತಿದ್ದ ಕಾರು ಮೋರಿಗೆ ಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ‌ ಶಿವಣ್ಣ(55) ಹೃದಯಾಘಾತವಾಗಿರುವವರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅವರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲು ಅವರ ನಿವಾಸಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಉದಯಗಿರಿಯ ಕಾರ್ಮಿಕರ ಭವಿಷ್ಯ ನಿಧಿ(ಪಿ.ಎಫ್) ಆಫೀಸ್ ರಸ್ತೆಯಲ್ಲಿ ಕಾರು ಚಾಲಕನಿಗೆ ಹಠಾತ್ ಹೃದಯಾಘಾತವಾಗಿದೆ. ಹೀಗಾಗಿ ನಿಯಂತ್ರಣ ಕಳೆದುಕೊಂಡ ಕಾರು, ಫುಟ್​​ಪಾತ್​​ ಮೇಲೆ ಗೂಡಂಗಡಿಯಲ್ಲಿ ಮೊಟ್ಟೆ ಹಾಗೂ ಹೂವಿನ ವ್ಯಾಪಾರ ಮಾಡುತ್ತಿದ್ದ ಮಹಿಳೆಗೆ ಗುದ್ದಿದೆ. ಇದರಿಂದ ಮಹಿಳೆಗೆ ಗಂಭೀರವಾಗಿ ಗಾಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೃದಯಾಘಾತವಾದ ಚಾಲಕ ಶಿವಣ್ಣ ಹಾಗೂ ಅಪಘಾತದಿಂದ ಗಾಯಗೊಂಡ‌ ಮಹಿಳೆ ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular