HomeKarnatakaಚಾರ್ಮಾಡಿ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಮೂಡಿಗೆರೆ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸುಮಾರು 100 ಅಡಿ ಆಳದ ಪ್ರಪಾತಕ್ಕೆ ಉರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕುಟುಂಬವೊಂದು ಈ ದುರ್ಘ‌ಟನೆಗೆ ತುತ್ತಾಗಿದೆ.

ಘಾಟಿಯ ಇಳಿಜಾರಿನಲ್ಲಿ ಸಂಭವಿಸಿದ ಈ ಅಪಘಾತದಲ್ಲಿ, ಕಾರಿನಲ್ಲಿದ್ದ ಶಂಕರ್, ಸೀತಮ್ಮ, ಭಾನುಪ್ರಿಯಾ, ಆರಾಧ್ಯ, ಹರೀಶ್ ಮತ್ತು ಶ್ರೇಯಸ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನೆಯ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಮಾಜ ಸೇವಕ ಆರಿಫ್ ಅವರು ಗಾಯಾಳುಗಳನ್ನು ರಕ್ಷಿಸಿ, ಆಂಬುಲೆನ್ಸ್ ಮೂಲಕ ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular