ತುಮಕೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಮಾಅರ್ಗ ಮಧ್ಯೆಯೇ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಗುಬ್ಬಿ ಬಳಿ ಯಲ್ಲಾಪುರ ಗೇಟ್ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ಚಾಲಕ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಕಾರು ಧಗ ಧಗನೆ ಬೆಂಕಿಯಲ್ಲಿ ಹೊತ್ತಿ ಉರಿದಿದೆ.
ಅಗ್ನಿ ಶಾಮಕ ಸಿಬ್ಬಂದಿ ವಿಷಯ ತಿಳಿದು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಕಾರು ಬೆಂಕಿಗಾಹುತಿಯಾಗಿದೆ. ಹೇಮಂತ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ತುಮಕೂರಿನಿಂದ ಹೊಸದುರ್ಗ ಕಡೆಗೆ ತೆರಳುತ್ತಿತ್ತು. ಈ ವೇಳೆ ಘಟನೆ ನಡೆದಿದೆ.
You Might Also Like
TAGGED:ಕಾರು