ಬೆಂಗಳೂರು: ಮನೆಯ ಬಳಿ ನಿಲ್ಲಿಸಿದ್ದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಸಿದ್ದನಪಾಳ್ಯದಲ್ಲಿ ಈ ಘಟನೆ ನಡೆದಿದೆ. ಮನೆಬಳಿ ನಿಲ್ಲಿಸಿದ್ದ ರಾಕೇಶ್ ಎಂಬುವವರಿಗೆ ಸೇರಿದ್ದ ಕಾರು ಏಕಾಏಕಿ ಬೆಂಕಿಗಾಹುತಿಯಾಗಿದೆ. ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
