HomeKarnatakaBREAKING: ನಿರ್ಜನ ರಸ್ತೆಯಲ್ಲೇ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಶವ ಪತ್ತೆ

BREAKING: ನಿರ್ಜನ ರಸ್ತೆಯಲ್ಲೇ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡುರಸ್ತೆಯಲ್ಲಿಯೇ ಕಾರ್ ಹೊತ್ತಿ ಉರಿದಿದೆ. ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆಯಾಗಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಹೋಗಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ ನಂತರ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಅನುಮಾನಾಸ್ಪದ ರೀತಿಯಲ್ಲಿ ಕಾರ್ ನಲ್ಲಿ ವ್ಯಕ್ತಿ ಸಜೀವ ದಹನವಾಗಿದ್ದಾರೆ. ಯಾರೂ ಇಲ್ಲದ ನಿರ್ಜನ ಪ್ರದೇಶದಲ್ಲಿ ಘಟನೆ ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿದೆಯೇ?, ಆತ್ಮಹತ್ಯೆಗೆ ಯತ್ನಿಸಿರಬಹುದೇ, ಅಥವಾ ಯಾರಾದರೂ  ಕೃತ್ಯವೆಸಗಿರಬಹುದೇ ಎನ್ನುವುದು ಗೊತ್ತಾಗಿಲ್ಲ. ಮೃತ ವ್ಯಕ್ತಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಲು ಪ್ರಯತ್ನ ನಡೆಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular